ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಸರ್ಕಲ್‌ನಿಂದ ಸಿಟಿ ಬಸ್ಸುಗಳನ್ನು ಸರ್ವಿಸ್ ಬಸ್ಸು ನಿಲ್ದಾಣಕ್ಕೆ ಸ್ಥಳಾಂತರಿಸಿದ ಕ್ರಮವು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಪರಿಷತ್ತು ಹಾಗೂ ಸ್ಟೇಟ್ ಬ್ಯಾಂಕ್ ಪರಿಸರದ ವ್ಯಾಪಾರಿಗಳ ಸೌಹಾರ್ದ ಒಕ್ಕೂಟದಿಂದ
ಮಂಗಳೂರು ನಗರದ ಕಮೀಷನರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಇದೇ ವೇಳೆ ಪ್ರತಿಭಟನಾಕಾರರು ಸಿಟಿ ಬಸ್ಸುಗಳಿಗೆ ಎಕ್ಸ್ ಪ್ರೆಸ್ ಬಸ್ಸುಗಳಿಗೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಗಳಿಗೆ ಒಂದೇ ನಿಲ್ದಾಣದಲ್ಲಿ ಸ್ಥಳ ಅವಕಾಶವನ್ನು ಒದಗಿಸುವ ಬಸ್ಸು ಮಾಲೀಕರ ಲಾಬಿಗೆ ಮಣಿದು ಜಿಲ್ಲಾಡಳಿತ, ಪೊಲೀಸು ಇಲಾಖೆಯ ಏಕಪಕ್ಷೀಯ ತೀರ್ಮಾನವನ್ನು ತೆಗೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.