Friday, April 18, 2025
Google search engine

Homeಅಪರಾಧಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ನಗರ ಸಭೆ ಕಂದಾಯ ನಿರೀಕ್ಷಕ

ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ನಗರ ಸಭೆ ಕಂದಾಯ ನಿರೀಕ್ಷಕ


ಚಾಮರಾಜನಗರ ಇ-ಸ್ವತ್ತು ಮಾಡಿಕೊಡಲು ೧ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಕಂದಾಯ ನಿರೀಕ್ಷಕಲೋಕಾ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ನಗರಸಭೆಯಲ್ಲಿ ಇಂದು ನಡೆದಿದೆ.
ಚಾಮರಾಜನಗರ ನಗರಸಭೆಯ ಕಂದಾಯ ನಿರೀಕ್ಷಕ ನಾರಾಯಣ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಕಂದಾಯ ಅಧಿಕಾರಿ. ಮಾದೇಶ್ ಎಂಬುವವರ ನಿವೇಶನದ ಇ-ಸ್ವತ್ತು ಮಾಡಿಕೊಡಲು ೧ ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇಂದು ೨೦ ಸಾವಿರ ರೂ. ಹಣ ಪಡೆಯುವಾಗ ಲೋಕಾ ಪೊಲೀಸರು ರೆಡ್ ಹ್ಯಾಂಡಾಗಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಪೊಲೀಸರು ನಾರಾಯಣ್ ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular