ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಹೊರ ಗುತ್ತಿಗೆ ನೌಕರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಹೊರಗುತ್ತಿಗೆ ನೌಕರರನ್ನ ನೇರ ಪಾವತಿಗೊಳಿಸಿ, ಪೌರ ಕಾರ್ಮಿಕರನ್ನ ಖಾಯಂ ಗೊಳಿಸಬೇಕು ಎಂದು ಒತ್ತಾಯಿಸಿದರು.
ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ಭರವಸೆ ಕೊಟ್ಟಿತ್ತು. ಈಗ ನುಡಿದಂತೆ ನಡೆಯದೆ ಪೌರಕಾರ್ಮಿಕರಿಗೆ ಅನ್ಯಾಯ ಮಾಡ್ತಿದೆ. ತಕ್ಷಣವೇ ಪೌರ ಕಾರ್ಮಿಕರನ್ನ ಖಾಯಂ ಗೊಳಿಸುವಂತೆ ಆಗ್ರಹಿಸಿದರು.