ಚಿತ್ರದುರ್ಗ: ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ಭಾನುವಾರ ಜಿಲ್ಲಾಡಳಿತ ಹಾಗೂ ನಗರಸಭೆ ಸಹಯೋಗದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಯಿತು. ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸ್ವಚ್ಛತಾ ಕಾರ್ಯ ಉದ್ಘಾಟಿಸಿ, ಸ್ವಚ್ಛತಾ ಪ್ರಮಾಣ ವಚನ ಬೋಧಿಸಿದರು.
ನಗರಸಭೆ ಪೌರಕಾರ್ಮಿಕರಾದ ರೇಣುಕಾ, ಸರಕಾರಿ ಪದವಿ ಕಾಲೇಜು ಪ್ರಾಂಶುಪಾಲ ನಾಗರಾಜ ಸೇರಿದಂತೆ ನಗರ ಮಹಿಳಾ ಶಕ್ತಿ ಸಂಘದ ಸದಸ್ಯರು, ನಗರಸಭೆ ಆರೋಗ್ಯ ನಿರೀಕ್ಷಕರು, ಪೌರಕಾರ್ಮಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
