ಚಿತ್ರದುರ್ಗ : ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಸ್ವಚ್ಛತಾ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ನ್ಯಾಯಾಂಗ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾ ನ್ಯಾಯಾಲಯದ ಆವರಣದ ಹೊರಗೆ ಸ್ವಚ್ಛತಾ ಕಾರ್ಯಕ್ರಮ ನಡೆಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಾಯಿತು.
ಇದಕ್ಕೂ ಮುನ್ನ ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಸ್ವಚ್ಛತೆ ಕುರಿತು ಪ್ರಮಾಣ ವಚನ ಸ್ವೀಕರಿಸಲಾಯಿತು. ನ್ಯಾಯಾಲಯ ಮತ್ತು ಜಿಲ್ಲಾ ಖಜಾನೆ ಮುಂಭಾಗದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಸ್ವಚ್ಛತೆ ಕಾಪಾಡಲು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಎಸ್.ರೇಖಾ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಶೇತ್ರ ನ್ಯಾಯಾಧೀಶ ಬಿ. ಎಸ್.ರೇಖಾ, ಮೇಲಿನ ಜಿಲ್ಲಾ ನ್ಯಾಯಾಧೀಶ ಎಸ್. ಕಲ್ಕಣಿ, ಬಿ.ಕೆ.ಕೋಮಲಾ, ಸಿವಿಲ್ ನ್ಯಾಯಾಧೀಶ ಕೆಂಪರಾಜು, ಚೈತ್ರಾ, ಉಜ್ವಲಾ ವೀರಣ್ಣ, ಗೀತಾ ಕುಂಬಾರ, ನೇಮಿಚಂದ್ರ, ಅನಿತಾ ಕುಮಾರಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಪೌರಾಯುಕ್ತ ರೇಣುಕಾ, ಸಿಬ್ಬಂದಿ ಜಾಫರ್, ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಕಾರ್ಯದರ್ಶಿ ಬಿ. ಗಂಗಾಧರ್, ವಕೀಲ ಉಮೇಶ್ ಹಾಗೂ ನ್ಯಾಯಾಂಗ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.