ಕೇರಳದ ವಯನಾಡಿನಲ್ಲಿ ಭೀಕರ ಭೂ ಕುಸಿತ ಘಟನೆ ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ. ಹೌದು, ಹಿಮಾಚಲದ ಕುಲು ನಗರದ ಬಳಿ ಭಾರೀ ಮೇಘಸ್ಫೋಟ ಸಂಭವಿಸಿದೆ.
ಮೇಘಸ್ಫೋಟದ ಪರಿಣಾಮ ಕುಲುವಿನ ನಿರ್ಮಲ್ನಲ್ಲಿ ಸುಮಾರು 19 ಜನರು ಕೊಚ್ಚಿ ಹೋಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅದರಲ್ಲೂ ಭಾರಿ ಮಳೆ ಪರಿಣಾಮ ಮಂಡಿ ಜಿಲ್ಲೆಯಲ್ಲಿ ಹಲವು ಮನೆ ಮತ್ತು ಜನರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಮೇಘಸ್ಫೋಟಕ್ಕೆ ಒಟ್ಟು 35 ಜನ ಕಣ್ಮರೆಯಾಗಿದ್ದಾರೆ. ಇದರಲ್ಲಿ ಕೆಲವರು ಸತ್ತಿರೋ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಜೊತೆಗೆ ನೋಡ ನೋಡುತ್ತಿದ್ದಂತೆ ಮೂರಂತಸ್ತಿನ ಕಟ್ಟಡ ನದಿಯಲ್ಲಿ ಕುಸಿದು ಕೊಚ್ಚಿ ಹೋಗಿರೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ದೌಡಾಯಿಸಿದೆ. ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ಸಂಜೀವ್ ಗಾಂಧಿ ಸೇರಿದಂತೆ ಉನ್ನತ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ.