ಕೆ ಆರ್ ನಗರ: ಕೃಷ್ಣರಾಜನಗರ ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಟೌನಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಶಾಸಕರಾದ ಡಿ ರವಿಶಂಕರ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ವಿವಿಧ ವೇಷ ಭೂಷಣ ಧರಿಸಿ ಮತ್ತು ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮಕ್ಕಳ ಈ ಒಂದು ಪ್ರತಿಭೆಯನ್ನು ನೋಡಿ ನಾನು ಬಹಳ ಖುಷಿ ಪಟ್ಟಿದ್ದೇನೆ. ಅವರ ಮುಂದಿನ ಶೈಕ್ಷಣಿಕ ಹಾಗೂ ಸಾಧನೆಗೆ ನನ್ನ ಕೈಲಾದ ಸಹಾಯವನ್ನು ಮಾಡುತ್ತೇನೆ ಎಂದರು.
ಸಂದರ್ಭದಲ್ಲಿ ಅಧಿಕಾರಿಗಳು ಶಿಕ್ಷಕರು ಸೇರಿದಂತೆ ಇನ್ನಿತರರು ಹಾಜರಿದ್ದರು.