ಬೆಂಗಳೂರು: ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೫೦ ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು.
ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು. ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು. ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ. ಎಂದರು.