Monday, April 7, 2025
Google search engine

HomeUncategorizedರಾಷ್ಟ್ರೀಯಸಿಎಂ ಅತಿಶಿ ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧನ ಸಾಧ್ಯತೆ: ಕೇಜ್ರಿವಾಲ್

ಸಿಎಂ ಅತಿಶಿ ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧನ ಸಾಧ್ಯತೆ: ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆಯಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆಯಿಂದ ಕೆಲವರು ನಲುಗಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಅತಿಶಿಯನ್ನು ಕಪೋಕಲ್ಪಿತ ಪ್ರಕರಣದಲ್ಲಿ ಬಂಧಿಸಲು ಯೋಜನೆ ರೂಪಿಸಿದ್ದಾರೆ. ಅದಕ್ಕೂ ಮುನ್ನ ಆಪ್ ಹಿರಿಯ ನಾಯಕರ ಮೇಲೆ ದಾಳಿ ನಡೆಸಲಾಗುವುದು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆ ಘೋಷಣೆಯಾದ ನಂತರ ಈ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕೇಜ್ರಿವಾಲ್ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ನಕಲಿ ಪ್ರಕರಣ ಸೃಷ್ಟಿ ಮಾಡಿ ಸಿಎಂ ಅತಿಶಿ ಅವರನ್ನು ಬಂಧಿಸಲು ಪ್ಲಾನ್ ಮಾಡಿದ್ದಾರೆ. ನಾವು ಸಿಎಂ ಅತಿಶಿ ಅವರೊಂದಿಗೆ ನಿಂತಿದ್ದೇವೆ ಮತ್ತು ನಾವು ಹೆದರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular