Saturday, April 19, 2025
Google search engine

Homeರಾಜ್ಯಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಕಲ್ಪನೆ: ಸಚಿವ ಕೃಷ್ಣಭೈರೇಗೌಡ

ಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಕಲ್ಪನೆ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಮತ್ತು ಕಲ್ಪನೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಜೊತೆಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ನಾಯಕರು ಭೇಟಿ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರವರ ಪ್ರಯತ್ನ, ಆಸೆ. ಅದು ಅವರಿಗೆ ಬಿಟ್ಟಿದ್ದು. ಅದು ತಪ್ಪು ಏನೂ ಅಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ ಅವರು ಪಕ್ಷದ ಉನ್ನತ ಮಟ್ಟದಲ್ಲಿದ್ದಾರೆ. ಇವರೆಲ್ಲಾ ನಾವು ಸಿಎಂ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ, ಸಿಎಂ ಬದಲಾವಣೆ ಎನ್ನುವುದು ಕೇವಲ ಊಹೆ ಮತ್ತು ಕಲ್ಪನೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಜೊತೆಗಿದೆ. ಇದರಲ್ಲಿ ವ್ಯಯಕ್ತಿಕವಾಗಿ ನನಗೆ ನೂರಕ್ಕೆ ನೂರು ಭರವಸೆ ಇದೆ ಎಂದು ಹೇಳಿದರು.

ಒಳ್ಳೆಯ ಕೆಲಸಗಾರ ಎಂದು ಗುರುತಿಸಿಕೊಂಡಿರುವ ತಮ್ಮ ಹೆಸರು ಸಿಎಂ ರೇಸ್‌ನಲ್ಲಿ ಬರಬಹುದಾ ಎಂಬ ಪ್ರಶ್ನೆಗೆ ಜನ ನನ್ನ ಆರು ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಮೂರು ಬಾರಿ ಮಂತ್ರಿ ಮಾಡಿದೆ. ನನ್ನ ತಂದೆ ತಾಯಿ ಪುಣ್ಯ ನನಗೆ ಸಿಕ್ಕಿದೆ. ಇದಕ್ಕಿಂತ ಇನ್ನೇನು ನನಗೆ ಬೇಕು. ಐದು ವರ್ಷ ಕೃಷಿ ಮಂತ್ರಿಯಾಗಿದ್ದೆ. ಪಂಚಾಯತರಾಜ್ ಇಲಾಖೆ ನಿರ್ವಹಿಸಿದ್ದೇನೆ. ಈಗ ಕಂದಾಯ ಸಚಿವನಾಗಿದ್ದೇನೆ. ಕೈ ತುಂಬಾ ಕೆಲಸ ಇದೆ. ದಿನದ ೨೪ ಗಂಟೆ ಅಲ್ಲ, ೪೮ ಗಂಟೆ ಇದ್ದರೂ ಸಾಕಾಗುವುದಿಲ್ಲ. ಇರುವುದರಲ್ಲಿ ಜನರಿಗೆ ಒಳ್ಳೆಯ ಕೆಲಸ ಮಾಡಿದರೆ ಅದೇ ನನಗೆ ಸೌಭಾಗ್ಯ. ಎಐಸಿಸಿ ಅಧ್ಯಕ್ಷರು, ಸಿಎಂ ಸೇರಿ ಎಲ್ಲರಿಂದ ಒಳ್ಳೆಯ ಗೌರವ ಸಿಕ್ಕಿದೆ. ಏನೆಲ್ಲಾ ಸಿಗಬೇಕೋ ಅದೆಲ್ಲವೂ ಸಿಕ್ಕಿದೆ. ಹಾಗಾಗಿ, ಏನೋ ಗೊಂದಲ ಎನ್ನುತ್ತಿದ್ದಿರಿ. ಆದರೆ, ನಾನು ಎಲ್ಲಾ ಕಡೆ ಓಡಾಡಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular