Sunday, April 20, 2025
Google search engine

Homeರಾಜ್ಯಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಕೊರತೆ ಆಗದಂತೆ ಹಣ ಬಿಡುಗಡೆ ಮಾಡಲು ಸಿಎಂ ಸೂಚನೆ

ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಕೊರತೆ ಆಗದಂತೆ ಹಣ ಬಿಡುಗಡೆ ಮಾಡಲು ಸಿಎಂ ಸೂಚನೆ

ಹೊಸಪೇಟೆ: ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ತಕ್ಷಣ ಅಗತ್ಯವಿದ್ದಷ್ಟು ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ಬರಗಾಲ ಮತ್ತು ಪರಿಣಾಮಗಳ ಬಗ್ಗೆ ತೀವ್ರ ನಿಗಾ ಇಡಬೇಕು. ನರೇಗಾ ಹಣ ಬಿಡುಗಡೆ ತಡವಾದರೂ ನಮ್ಮಂದಲೇ ಹಣ ಬಿಡುಗಡೆ ಮಾಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಡ ಮಾಡಬಾರದು ಎನ್ನುವ ಸೂಚನೆಗಳನ್ನು ನೀಡಿದ್ದಾರೆ.

ಸಚಿವರಾದ ಬೈರತಿ ಸುರೇಶ್, ಶಿವರಾಜ ತಂಗಡಗಿ, ಶಾಸಕರಾದ ಗವಿಯಪ್ಪ, ಡಾ.ಶ್ರೀನಿವಾಸ್ ಅವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular