ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಜೊತೆಗಿನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಆದರೆ ಈ ಮುಷ್ಕರಕ್ಕೆ ಹೈಕೋರ್ಟ್ ಒಂದು ದಿನದ ಬ್ರೇಕ್ ಹಾಕಿದೆ.
ಬೆಂಗಳೂರಿನ ನಿವಾಸಿ ಜೆ. ಸುನೀಲ್ ಮತ್ತು ಇತರರು ಮುಷ್ಕರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುದಗಲ್ ಮತ್ತು ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರ ಹಾಗೂ ಸಾರಿಗೆ ನಿಗಮಗಳಿಗೆ ನೋಟಿಸ್ ಜಾರಿಗೊಳಿಸಿದೆ.
ನಾಳೆಯವರೆಗೆ ಮುಷ್ಕರ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ. ನಾಳೆ ಮುಖ್ಯ ನ್ಯಾಯಮೂರ್ತಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ, ಇಂದು ಅವರ ಪೀಠ ಕಾರ್ಯನಿರತವಾಗಿರಲಿಲ್ಲ.