ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬಳಿಕ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ
ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಸಭೆಗಾಗಿ ನಿನ್ನೆ ನವದೆಹಲಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದಾರೆ. ಇಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ.ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ಪ್ರಧಾನಿ ಮೋದಿಗೆ ಮೈಸೂರು ಪೇಟ, ಶಾಲು ಹೊದಿಸಿ ಸನ್ಮಾನಿಸಿದರು. ಶ್ರೀಗಂಧದ ಜಂಬೂ ಸವಾರಿ ಕಲಾಕೃತಿಯನ್ ಗಿಫ್ಟ್ ಆಗಿ ಪ್ರಧಾನಿ ಮೋದಿ ಅವರಿಗೆ ನೀಡಿದರು.
ಸಿದ್ಧರಾಮಯ್ಯ ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದ್ದು ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಅನುದಾನ ಕುರಿತು ಪ್ರಧಾನಿ ಮೋದಿ ಬಳಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಮೋದಿ ಜೊತೆಗೆ ಐದು ನಿಮಿಷ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಿಎಂ ಸಿದ್ಧರಾಮಯ್ಯ ಬಳಿಕ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಮಾಡಿದರು.
ಹಾಗೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.
