ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ ೧೪ ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ೧೪ ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.