Monday, April 28, 2025
Google search engine

Homeರಾಜ್ಯಶಸ್ತ್ರಾಸ್ತ್ರ ತೊರೆಯಿರಿ ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಕರೆ

ಶಸ್ತ್ರಾಸ್ತ್ರ ತೊರೆಯಿರಿ ನಕ್ಸಲರಿಗೆ ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

ನಕ್ಸಲರು ಮುಖ್ಯವಾಹಿನಿಗೆ ಬರಲು ಮನಸ್ಸು ಮಾಡಿ, ಮಾತುಕತೆಗೆ ಮುಂದಾದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸುತ್ತದೆ. ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ. ಕರ್ನಾಟಕದ ಎಲ್ಲ ನಕ್ಸಲರೂ ಸಂಪೂರ್ಣವಾಗಿ ಶರಣಾಗತರಾಗಬೇಕು. ನಕ್ಸಲರಿಗಾಗಿ ಸರ್ಕಾರ ನೀತಿ ರೂಪಿಸಿದೆ. ಈ ನೀತಿಯನ್ನು ಇನ್ನಷ್ಟು ಸರಳಗೊಳಿಸಲಾಗುವುದು, ಸಮರ್ಪಕವಾಗಿ ಜಾರಿ ಮಾಡಲಾಗುವುದು’ ಎಂದಿದ್ದಾರೆ.

ನಕ್ಸಲೀಯ ಚಟುವಟಿಕೆಗಳು ನೆರೆಯ ರಾಜ್ಯಗಳಂತೆ ಕರ್ನಾಟಕದಲ್ಲಿ ವಿಪರೀತ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ನಕ್ಸಲೀಯ ಚಟುವಟಿಕೆಗಳು ಕಾಣಿಸುತ್ತಿವೆ. ಅಮಾಯಕರು, ಪೊಲೀಸರ ಜೀವಕ್ಕೂ ಹಾನಿಯಾಗಿದೆ. ಪ್ರಜಾತಂತ್ರ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ಕಳೆದುಕೊಂಡಿದ್ದಾರೆ. ಇತರರ ಜೀವಹಾನಿಗೂ ಕಾರಣವಾಗಿದ್ದಾರೆ. ಇದು ನೋವಿನ ವಿಚಾರ. ಇಂತಹ ಪ್ರಕರಣಗಳಲ್ಲಿ ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರಲು ಸಾಧ್ಯವಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿ ನೆಲೆಸುವಂತೆ ಮಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲೂ ಹಿಂಜರಿಯದು’ ಎಂದು ಎಚ್ಚರಿಸಿದ್ದಾರೆ.

ಶರಣಾಗತರಾದವರ ಮೇಲಿನ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಅವರಿಗೆ ಕಾನೂನಿನ ನೆರವು ನೀಡುತ್ತದೆ. ಈಗಾಗಲೇ ಶರಣಾಗತರಾದ ನಕ್ಸಲರ ಅಗತ್ಯಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಗೆ ವೇಗ ನೀಡಲಾಗುವುದು’ ಎಂದು ತಮ್ಮನ್ನು ಭೇಟಿ ಮಾಡಿದ ವಿವಿಧ ಪ್ರಗತಿಪರರು ಹಾಗೂ ಜನಪರ ವೇದಿಕೆಗಳ ಮುಖಂಡರಿಗೆ ಭರವಸೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular