Friday, April 11, 2025
Google search engine

Homeರಾಜ್ಯಕೋಟ್ಯಂತರ ಜನರ ಹರಕೆ, ಹಾರೈಕೆಗಳು ಫಲಕೊಟ್ಟಿದೆ : ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ...

ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಫಲಕೊಟ್ಟಿದೆ : ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ೨೦ ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದಾರೆ.

ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular