ವಿಜಯಪುರ: ಜಿಲ್ಲೆಯ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಇಂದು ಬುಧವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೃಷ್ಣಗೆ ಗಂಗಾಪೂಜೆ ನೆರವೇರಿಸಿದರು. ಈ ಬಳಿಕ ಸಂಪ್ರದಾಯದಂತೆ ಆಲಮಟ್ಟಿ ಜಲಾಯಶಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆಯಲ್ಲಿ ಸಚಿವ ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ, ಹೆಚ್.ವೈ ಮೇಟಿ, ಕಾಶಪ್ಪನವರು ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.