ಮೈಸೂರು : ಕುಸ್ತಿ ಗದೆ ಎತ್ತುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ದಸರಾ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿದರು. ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ದೇವರಾಜು ಅರಸು ವಿವಿದೋದ್ದೇಶ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದಾವಣಗೆರೆಯ ಪೈಲ್ವಾನ್ ಕಾರ್ತಿಕ್ ಕಾಟೆ v/s ದೆಹಲಿಯ ಪೈಲ್ವಾನ್ವಿ ವಿಕಿ ಅವರ ನಡುವೆ ನಡೆದ ಕುಸ್ತಿ ಪಂದ್ಯವನ್ನು ಸಿಎಂ ವೀಕ್ಷಿಸಿದರು. ನಂತರ ಕುಸ್ತಿಪಟು ಚಿಕ್ಕಳಿಯ ಪೈಲ್ವಾನ್ ರವಿ ಮತ್ತು ಪೈಲ್ವಾನ್ ಪವನ್ ಅವರ ನಡುವೆ ಪಂದ್ಯ ನಡೆಯಿತು.
ಆರಂಭಿಕ ಕುಸ್ತಿ ಪಂದ್ಯಾವಳಿಯು ದಾವಣಗೆರೆಯ ಪೈಲ್ವಾನ್ ಕಾರ್ತಿಕ್ ಕಾಟೆ v/s ದೆಹಲಿಯ ಪೈಲ್ವಾನ್ವಿ ವಿಕಿ, ಬೆಳಗಾಂನ ಸುನಿಲ್ ಪಡುತಾರೆ v/s ಪೈಲ್ವಾನ್ ರಾಹುಲ್ ರಾಟೆ ನಡುವೆ ನಡೆಯಲಿದೆ. ಬಾಲಕಿಯರ ವಿಭಾಗದಲ್ಲಿ ಬನ್ನೂರಿನ ಪೈಲ್ವಾನ್ ಜಾಹ್ನವಿ v/s ಮಂಡ್ಯದ ಪೈಲ್ವಾನ್ ಸ್ಫೂರ್ತಿ ಹಾಗೂ ರಮನಹಳ್ಳಿಯ ಪೈಲ್ವಾನ್ ಸಿಂಚನ v/s ಮಂಡ್ಯದ ಅಮೂಲ್ಯ ನಡುವೆ ಕುಸ್ತಿ ಪ್ರಾರಂಭಗೊಂಡವು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕರಾದ ಶ್ರಿವತ್ಸ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಡಿ.ರವಿಶಂಕರ್, ಕೃಷ್ಣಮೂರ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ವಿಧಾನ ಪರಿಷತ್ ಶಾಸಕರಾದ ಮಂಜೇಗೌಡ, ತಿಮ್ಮಯ್ಯ, ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತ ರಮೇಶ್, ಬಿ.ಸೀಮಾ ಲಾಟ್ಕರ್, ಅಪರ ಪೊಲೀಸ್ ಅಧೀಕ್ಷಕರಾದ ಡಾ.ನಂದಿನಿ, ಉಪ ಮಹಾಪೌರರಾದ ಜಿ.ರೂಪ, ನಂಜನಗೂಡು ಪೊಲೀಸ್ ಅಧೀಕ್ಷಕ ಗೋವಿಂದರಾಜು ಹಾಗೂ ದಸರಾ ಕುಸ್ತಿ ಸಮಿತಿಯ ಅಧಿಕಾರಿಗಳು ಭಾಗವಹಿಸಿದ್ದರು.