ಬೆಂಗಳೂರು : ಇಂದು ದೇಶಾದ್ಯಂತ ರಾಮನವಮಿ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ರಾಮನವಮಿಯ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಭು ಶ್ರೀರಾಮಚಂದ್ರನ ವಚನ ಪಾಲನೆ, ಪ್ರಜಾಸೇವೆಯ ಬದ್ಧತೆ, ನ್ಯಾಯ ನಿಷ್ಠುರತೆ, ಪ್ರೀತಿ – ಮಮತೆ ಮುಂತಾದ ಮಾನವೀಯ ಮೌಲ್ಯಗಳು ನಮ್ಮೆಲ್ಲರ ಆದರ್ಶವಾಗಲಿ. ಪಾನಕ – ಕೋಸಂಬರಿಯ ಜೊತೆ ಸ್ನೇಹ – ಸೌಹಾರ್ದತೆಯು ಮಿಳಿತಗೊಳ್ಳಲಿ, ದ್ವೇಷ ಅಳಿದು ಪ್ರೀತಿಯ ಬೆಳಕು ಎಲ್ಲೆಡೆ ಬೆಳಗಲಿ ಎಂದು ಹಾರೈಸುತ್ತೇನೆ. ಸರ್ವರಿಗೂ ರಾಮನವಮಿಯ ಶುಭಾಶಯಗಳು ಎಂದು ಹೇಳಿದ್ದಾರೆ.