ಬಾಗಲಕೋಟೆ : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡರುವ ಪ್ರಾಸಿಕ್ಯೂಷನ್ ವಿರೋಧಿಸಿ ಇಂದು ಸೋಮವಾರ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಾಗಲಕೋಟೆಯ ಜಿಲ್ಲಾಧಿಕಾರಿಗಳ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆ ವೇಳೆ ರಾಜ್ಯಪಾಲರ ಪ್ರತಿಕೃತಿ ದಹನದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಮಾನಿ ದ್ಯಾಮಪ್ಪ ಎಂಬುವರಿಗೆ ಬೆಂಕಿ ತಗುಲಿದ್ದು, ಮುಖ,ಎದೆ, ಭುಜಕ್ಕೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.