Tuesday, April 22, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ: ಸಂಸದ ಕಾರಜೋಳ

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ: ಸಂಸದ ಕಾರಜೋಳ

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾವದರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿ ಅನೇಕರು ಹಗುರವಾಗಿ ಮಾತನಾಡಿದ್ದಾರೆ. ಅವರು ಜೆಪಿಸಿ ಅಧ್ಯಕ್ಷರಾಗಿ ಬಂದಿದ್ದರು. ರಾಜ್ಯದಲ್ಲಿ ಸಂವಿಧಾನತ್ಮಕಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ತಿಳಿಸಿದ್ದಾರೆ. ಜೆಪಿಸಿ ಅಧ್ಯಕ್ಷರು ಬಂದಾಗ ಒಂದು ಪ್ರೋಟೋಕಾಲ್ ಇರುತ್ತದೆ. ಇಲ್ಲಿ ಯಾವ ಪ್ರೋಟೋಕಾಲ್ ಇರಲಿಲ್ಲ. ಜೆಪಿಸಿ ಬಂದಾಗ ಎಸ್‌ಪಿ, ಡಿಸಿ ಎಲ್ಲರೂ ಬರಬೇಕು. ಅದನ್ನು ಬಿಟ್ಟು ಪ್ರೋಟೋಕಾಲ್ ಪಾಲನೆ ಮಾಡದೆ ಅಗೌರವ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಹಗರಣದಲ್ಲಿ ಮುಳುಗಿದೆ. ರಾಜ್ಯ ಆರ್ಥಿಕ ದಿವಾಳಿಯಾಗಿದೆ. 25 ಸಾವಿರ ಕೋಟಿ ರೂ. ಎಸ್‌ಸಿ, ಎಸ್‌ಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಹಗರಣದ ದುಡ್ಡು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಇವತ್ತು ಉಪಚುನಾವಣೆಗೆ ಅದೇ ಹಣ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಡೂರಿನ ಜನ ಮಾತನಾಡುತ್ತಿದ್ದಾರೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular