ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗ ಯಾವುದೇ ಅಧಿಕಾರ ಹೊಂದಿಲ್ಲ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಎಲ್ಲ ಕಾನೂನು ಬಾಹಿರ ಕೆಲಸಗಳನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಗೆ ನಾಚಿಕೆಯಾಗಬೇಕು. ರಾಹುಲ್ ಗಾಂಧಿ ಇದನ್ನೇ ಹೇಳುತ್ತಾರಾ ಎಂದು ಪ್ರಶ್ನಿಸಿದರು.