Friday, April 11, 2025
Google search engine

Homeರಾಜ್ಯಸುದ್ದಿಜಾಲಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ : ಸಚಿವ ಎಚ್ ಸಿ ಮಹದೇವಪ್ಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ : ಸಚಿವ ಎಚ್ ಸಿ ಮಹದೇವಪ್ಪ

ಚಾಮರಾಜನಗರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದನೇ ಹಲವು ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ ಚರ್ಚಿಸಿದರು. ಈ ವಿಚಾರವಾಗಿ ಸಚಿವ ಎಚ್ ಸಿ ಮಹದೇವಪ್ಪ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎಂದು ತಿಳಿಸಿದರು.

ಚಾಮರಾಜನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರು ೧೩೬ ಸೀಟುಗಳನ್ನು ಗೆಲ್ಲಿಸಿರುವುದು ರಾಜೀನಾಮೆ ಕೊಡೋಕ ವಿಜಯೇಂದ್ರ ಕೇಳಿದ್ದಕ್ಕೆ ರಾಜೀನಾಮೆ ಕೊಡೋದಕ್ಕೆ ಜನ ಗೆಲ್ಲಿಸಿದ್ದ ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಎಚ್ ಡಿ ಕುಮಾರಸ್ವಾಮಿ, ಜನಾರ್ಧನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಮೇಲೆ ಸಾಕಷ್ಟು ಪ್ರಕರಣಗಳಿವೆ. ಬಿಜೆಪಿ ನಾಯಕರು ಮೊದಲು ತಮ್ಮದೆಲ್ಲವೂ ಶುದ್ಧಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಶಾಸಕರು ಮಂತ್ರಿಗಳು ಸಿಎಂ ಸಿದ್ದರಾಮಯ್ಯ ಪರವಾಗಿ ಇದ್ದಾರೆ. ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ. ಇನ್ನು ಮುಡಾ ಹಗರಣ ವೈಟ್ನರ್ ಬಳಸಿ ದಾಖಲೆ ತಿದ್ದಿರುವ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಸಿಎಂ ಪಾತ್ರ ಇಲ್ಲದಿದ್ದರೂ ರಾಜಕೀಯ ಮಾಡುತ್ತಿದ್ದಾರೆ. ಅತಿವೃಷ್ಟಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆ ಕಡೆ ಗಮನ ಕೊಡುತ್ತಿಲ್ಲ ನ್ಯಾಯಾಂಗ ತನಿಖೆಗೆ ಆದೇಶ ಇದೆ ಕೋರ್ಟ್ ಮುಂದೆ ಪ್ರಕರಣವಿದೆ ಎಂದರು.

ಹಿಂದುಳಿದ ವರ್ಗದ ನಾಯಕನ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ.ಸಿದ್ದರಾಮಯ್ಯ ಪ್ರಮಾಣಿಕ ಬದ್ಧತೆಯ ನಾಯಕ. ಸಿಎಂ ಸಾರ್ವಜನಿಕ ಜೀವನಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನ ನಡೆಯುತ್ತಿದೆ.ಜೆಡಿಎಸ್ ಬಿಜೆಪಿ ಹಾಗೂ ಕೇಂದ್ರ ಸರ್ಕಾರದಿಂದ ಪಿತೂರಿ ನಡೆಯುತ್ತಿದೆ ಎಂದು ಸಚಿವ ಎಚ್ ಸಿ ಮಹದೇವಪ್ಪ ಆರೋಪಿಸಿದರು.

RELATED ARTICLES
- Advertisment -
Google search engine

Most Popular