Monday, April 21, 2025
Google search engine

Homeರಾಜ್ಯನಾನು ಕನ್ನಡದ ಪರವಾಗಿ ಇದ್ದೀನಿ ಅಂತ ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಿದ್ದಾರೆ : ಕರವೇ ಅಧ್ಯಕ್ಷ...

ನಾನು ಕನ್ನಡದ ಪರವಾಗಿ ಇದ್ದೀನಿ ಅಂತ ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಿದ್ದಾರೆ : ಕರವೇ ಅಧ್ಯಕ್ಷ ನಾರಾಯಣಗೌಡ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕನ್ನಡಿಗರಿಗೆ ಸರ್ಕಾರಿ ಉದ್ಯೋಗ ಮೀಸಲಾತಿ ಕುರಿತಂತೆ ಇಂದು ಸೋಮವಾರ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿತು. ನಾನು ಕನ್ನಡದ ಪರವಾಗಿ ಇದ್ದೀನಿ ಅಂತ ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ, ಕಾನೂನು ತಜ್ಞರ ಜೊತೆ ನಾಳೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಖುಷಿಯಿಂದ ಸಿಎಂ ಸಿದ್ದರಾಮಯ್ಯ ಅವರು ಮನವಿ ಸ್ವೀಕಾರ ಮಾಡಿದ್ದಾರೆ ಎಂದರು.

ಮುಂದೆ ಮಾಡಬೇಕಾದ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡಿದ್ದಾರೆ. ಸಿಎಂ ಗೆ ಕನ್ನಡದ ನಾಡು ನುಡಿ ಬಗ್ಗೆ ಇರುವ ಕಳಕಳಿ ವ್ಯಕ್ತವಾಗಿದೆ. ಕಾದು ನೋಡಿ ನಂತರ ಮುಂದಿನ ಹೋರಾಟವನ್ನು ರೂಪಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದರು.

ಕನ್ನಡಿಗರ ಉದ್ಯೋಗಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದ್ದು, ಸರೋಜಿನಿ ಮಹಿಷಿ ವರದಿಗಾಗಿ ೪೦ ವರ್ಷದಿಂದ ಹೋರಾಟ ಮಾಡಲಾಗುತ್ತಿದೆ. ವರದಿ ಕುರಿತ ಎಲ್ಲಾ ವಿಚಾರಗಳನ್ನು ಸಿಎಂ ಗೆ ಮನವರಿಕೆ ಮಾಡಿದ್ದೇವೆ ಎಂದು ಸಿಎಂ ಭೇಟಿ ಬಳಿಕ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹೇಳಿಕೆ ನೀಡಿದರು.

ಮಹಿಷಿ ವರದಿ ಜಾರಿಗೆ ತಂದರೆ ಕನ್ನಡಿಗರು ಬದುಕು ಕಟ್ಟಿಕೊಳ್ಳುತ್ತಾರೆ.ಸಿಎಂ ಸಿದ್ದರಾಮಯ್ಯ ಮೇಲೆ ಭರವಸೆ ಇದೆ. ಮುಂದಿನ ವಾರ ದೆಹಲಿಯಲ್ಲೂ ಕೇಂದ್ರ ಸಚಿವರನ್ನು ಭೇಟಿಯಾಗುವೆ. ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ ಸೋಮಣ್ಣ ಅವರನ್ನು ಭೇಟಿಯಾಗುತ್ತೇನೆ. ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಕೇಂದ್ರ ಸಚಿವರ ಜೊತೆಗೆ ಚರ್ಚಿಸುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular