ಮಂಡ್ಯ: ಬೆಂಗಳೂರಿಗರಿಗೆ ಸಿಹಿಸುದ್ದಿ ಸಿಕ್ಕಿದ್ದು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಇಂದು ಲೋಕಾರ್ಪಣೆ ಮಾಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿಕೆ ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಸಚಿವ ಚಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಉಪಸ್ಥಿತರಿದ್ದರು.
ಈ ಮೂಲಕ ದಶಕದ ಕನಸಿನ ಯೋಜನೆಗೆ ಚಾಲನೆ ಸಿಕ್ಕಂತಾಗಿದೆ. 4336 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಯೋಜನೆಯಿಂದ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗೆ ಕುಡಿಯುವ ನೀರು ಪೂರೈಸಬಹುದಾಗಿದೆ.