ಹಾಸನ : ಹಾಸನದಲ್ಲಿ ಇಂದು ಗುರುವಾರ ಕಾಂಗ್ರೆಸ್ ನಿಂದ ಜನಕಲ್ಯಾನ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಇಂದಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಹೆಚ್. ಮುನಿಯಪ್ಪ, ಜಮೀರ್ ಅಹ್ಮದ್ ಖಾನ್,ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
ಸಮಾವೇಶಕ್ಕೆ ಲಕ್ಷಾಂತರ ಜನರು ಸೇರಿದ್ದು, ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು ೧,೫೦೦ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.