Saturday, October 4, 2025
Google search engine

Homeರಾಜ್ಯಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ವರದಿ: ಸ್ಟೀಫನ್ ಜೇಮ್ಸ್

ಬೆಳಗಾವಿಯ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾನ ಶಿಲಾನ್ಯಾಸ, ಸ್ಮಾರ್ಟ್ ಸಿಟಿಯಡಿ ನಿರ್ಮಾಣಗೊಂಡ ನಗರ ಬಸ್‌ ನಿಲ್ದಾಣ ಉದ್ಘಾಟನೆ ಮತ್ತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಡಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆಯನ್ನು ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬಹುದಿನಗಳ ಕನಸು ಇಂದು ನನಸಾಗುತ್ತಿದೆ. ಜಿಲ್ಲೆಯ ಬಡಜನರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗಲೆಂದು ಇದನ್ನು ಆರಂಭಿಸಲಾಗಿದೆ. ಅಲ್ಲದೇ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಮುತುವರ್ಜಿಯಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ಕೂಡ ಆರಂಭಿಸಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಪ್ರತಿಯೊಂದು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯಕ್ಕೆ ಇದು ಸಾಕ್ಷಿಯಾಗಿದೆ. ರೋಗಿಗಳು ಇದರ ಸದುಪಯೋಗವನ್ನು ಪಡೆಯಬೇಕು ಎಂದರು. ಉನ್ನತ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಖಾಸಗಿ ಆಸ್ಪತ್ರೆಗಳು ದುಬಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡುತ್ತಿದ್ದು ಅವುಗಳಿಗೆ ಪೈಪೋಟಿ ನೀಡುವ ಉದ್ದೇಶದಿಂದ
ಸರ್ಕಾರದ ಮಟ್ಟದಲ್ಲಿ ಕಡಿಮೆ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಆರಂಭಿಸಿ, ಬಡರೋಗಿಗಳಿಗೆ ಸೇವೆಯನ್ನು ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡಿಲ್ಲ. ಕೆ.ಎಲ್.ಇ. ವೈದ್ಯರು ಉಚಿತವಾಗಿ ಸೇವೆ ನೀಡುತ್ತಿದ್ದಾರೆಂದು ಕೃತಜ್ಞತೆಗಳನ್ನು ಸಲ್ಲಿಸಿದರು. ಅಲ್ಲದೇ ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉತ್ತರ ಶಾಸಕ ಆಸೀಫ್ ಸೇರ್, ಸಚಿವರಾದ ರಾಮಲಿಂಗಾ ರೆಡ್ಡಿ, ಉನ್ನತ್ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಶಾಸಕರಾದ ರಾಜು ಕಾಗೆ, ಮಹಾಂತೇಶ್ ಕೌಜಲಗಿ, ಬಾಬಾಸಾಹೇಬ್ ಪಾಟೀಲ್, ಮಹೇಂದ್ರ ತಮ್ಮಣ್ಣವರ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ನಾಗರಾಜ್ ಯಾದವ್, ಕೆ.ಎಲ್.ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಇನ್ನುಳಿದ ಗಣ್ಯರು ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular