ತುಮಕೂರು : ತುಮಕೂರಿನಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಬ್ಯಾಟಿಂಗ್ ಮಾಡುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಅವರು, ತುಮಕೂರು ಜಿಲ್ಲೆಯಲ್ಲಿ ಸುಮಾರು 938 ಕೋಟಿ ರೂ. ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿದ್ದು, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ.
ಪಿ ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಈಗಾಗಲೇ ಕೆಎಸ್‌ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್)ಗೆ ಹಸ್ತಾಂತರಿಸಲಾಗಿದೆ. ಬರೋಬ್ಬರಿ 150 ಕೋಟಿ ರೂ. ವೆಚ್ಚದ ಸುಸಜ್ಜಿತ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಎರಡು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಸ್ಟೇಡಿಯಂ ನಿರ್ಮಾಣವಾದರೆ, ಇದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಪರ್ಯಾಯವಾಗಲಿದೆ.