ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿನ ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಸೋಮವಾರ ಭೇಟಿ ನೀಡಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.
ಬಳಿಕ ವಿದ್ಯಾರ್ಥಿನಿಯರ ಜತೆ ಕೆಲ ಹೊತ್ತು ಸಂವಾದ ನಡೆಸಿದರು.
ನೂತನ ಕಟ್ಟಡಗಳ ನೀಲನಕ್ಷೆಯನ್ನು ಗಮನಿಸಿದ ಮುಖ್ಯಮಂತ್ರಿ, ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿನಿಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಕೆ.ಹರೀಶ್ ಗೌಡ ಹಾಗೂ ಅಧಿಕಾರಿಗಳು ಇದ್ದರು.
