Thursday, April 3, 2025
Google search engine

Homeರಾಜ್ಯಸುದ್ದಿಜಾಲಝೀರೋ  ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಪೊಲೀಸ್ ಆಯುಕ್ತರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ

ಝೀರೋ  ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಪೊಲೀಸ್ ಆಯುಕ್ತರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಪ್ರವಾಸ ಕೈಗೊಂಡಿದ್ದು,  ಝೀರೋ  ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಪೊಲೀಸ್ ಆಯುಕ್ತರ ವಿರುದ್ಧ ಗರಂ ಆಗಿದ್ದಾರೆ.

ಮೈಸೂರು ಏರ್ ಪೋರ್ಟ್ ನಿಂದ ಜಿಲ್ಲಾ ಪಂಚಾಯತ್ ಆವರಣಕ್ಕೆ ಬಂದಿದ್ದ ಮುಖ್ಯಮಂತ್ರಿಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಕ್ಕೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಏಕೆ ಝೀರೋ ಟ್ರಾಫಿಕ್ ಮಾಡಿದ್ದೀರಿ? ನಿಮಗೆ ಗೊತ್ತಿದೆಯಾ? ಝೀರೋ ಟ್ರಾಫಿಕ್ ಬೇಡ ಅಂತಾ ಹೇಳಿದ್ದೆ. ಡೋಂಟ್ ಡೂ ದಟ್ ಎಂದು ಬಾನೋತ್ ಹಾಗೂ ಡಿಸಿಪಿ ಮುತ್ತುರಾಜ್ ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಬಾನೋತ್ ಅವರು ಸುಮ್ಮನೆ ಏನೂ ಮಾತನಾಡದೆ ನಿಂತಿದ್ದರು.

ಸಿದ್ದರಾಮಯ್ಯ ಅವರು, ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿಗಳನ್ನು ತಪ್ಪಿಸಲು ಬೆಂಗಳೂರು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು.

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್ ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ನಾನು ಈ ನಿರ್ಧಾರ ತೆಗೆದುಕೊಂಡಿದ್ದೆನೆ ಎಂದು ಸಿದ್ದರಾಮಯ್ಯ ಹೇಳಿದ್ದರು.

RELATED ARTICLES
- Advertisment -
Google search engine

Most Popular