Friday, April 18, 2025
Google search engine

Homeರಾಜಕೀಯಮುಡಾ ಹಗರಣ ಜಟಾಪಟಿ ನಡುವೆ ರಾಜ್ಯಪಾಲರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ ಜಟಾಪಟಿ ನಡುವೆ ರಾಜ್ಯಪಾಲರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಭೇಟಿಯಾಗಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದರು.

ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸಾಕಷ್ಟು ಸದ್ದು ಮಾಡಿದ್ದು, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಆದೇಶಿಸಿದ್ದರು. ಈ ಬೆನ್ನಲ್ಲೆ ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್‌ ಕೂಡ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

RELATED ARTICLES
- Advertisment -
Google search engine

Most Popular