Sunday, April 20, 2025
Google search engine

Homeರಾಜ್ಯಸುದ್ದಿಜಾಲಸರಕಾರದ ಯೋಜನೆಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ವಿದ್ಯಾರ್ಥಿನಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಸರಕಾರದ ಯೋಜನೆಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ವಿದ್ಯಾರ್ಥಿನಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿ ತಮಗೆ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ.

ವಿದ್ಯಾರ್ಥಿನಿಯನ್ನು ಭೇಟಿಯಾದ ಫೋಟೊ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ( ಮೊಟ್ಟೆ ) ನೀಡುವುದೂ ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಇಂದು ಭೇಟಿಮಾಡಿದೆ. ಕೃಷಿ ಮೇಳ ಉದ್ಘಾಟನೆಗೆ ಧಾರವಾಡಕ್ಕೆ ತೆರಳಿದ್ದ ವೇಳೆಯಲ್ಲಿ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿದ್ದು ನನಗೆ ಖುಷಿ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳು, ವಿದ್ಯಾರ್ಥಿಸ್ನೇಹಿ ಕಾರ್ಯಕ್ರಮಗಳ ಮೂಲಕ ನಾಡಿನ ಜನತೆಗೆ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸ್ವಾವಲಂಬಿ ಬದುಕಿನ ಕನಸಿಗೆ ಬೆಂಬಲವಾಗಿ ನಿಂತಿದೆ. ನಮ್ಮ ಈ ಯೋಜನೆಗಳ ಫಲಾನುಭವಿಯಾದ ಪುಟ್ಟ ಹುಡುಗಿಯೊಬ್ಬಳು ನನ್ನೊಂದಿಗೆ ಪತ್ರದ ಮೂಲಕ ತನ್ನ ಸಂತಸ ಹಂಚಿಕೊಂಡು, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಳು. ಪತ್ರ ಓದಿದಾಗಿಂದ ಆ ಮಗುವನ್ನು ಒಮ್ಮೆ ಭೇಟಿಯಾಗಬೇಕೆಂದು ಬಯಸಿದ್ದೆ, ಅದು ಇಂದು ಸಾಧ್ಯವಾಯಿತುಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇಂತಹ ಮುಗ್ಧ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular