Friday, April 11, 2025
Google search engine

Homeರಾಜ್ಯಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ

ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ತಮಗಿರುವ ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯನ್ನು ಅವರು ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

ಸಿದ್ದರಾಮಯ್ಯರ ವಿರುದ್ಧ ದೂರು ನೀಡಿದ ಹಿನ್ನಲೆ ರಾಜ್ಯಪಾಲರು ಆದೇಶ ಕೊಟ್ಟ ನಂತರ ಹೈಕೋರ್ಟ್ ಹಾಗೂ ಸೆಷನ್ ಕೋರ್ಟ್ ಆದೇಶ ಕೊಟ್ಟಿದೆ. ಪ್ರತಿ ಹಂತದಲ್ಲೂ ಕೇಸ್ ಇನ್ನಷ್ಟು ಬಿಗಿಗೊಳ್ಳುತ್ತಿದೆ. ಮುಂದೆ ಚಿಂತನೆ ಮಾಡುವ ಅವಶ್ಯಕತೆ ಇದೆ. ಕೋರ್ಟ್‌ನಲ್ಲಿ ಹೋರಾಟ ಮಾಡುವುದಕ್ಕೆ ಯಾರಿಗಾದರೂ ಅವಕಾಶವಿದೆ. ಆದರೆ ಸಾರ್ವಜನಿಕವಾಗಿ ಅವರ ಮೇಲಿರುವ ವಿಶ್ವಾಸ ಉಳಿಸಿಕೊಳ್ಳಬೇಕು. ಅದನ್ನು ಉಳಿಸಿಕೊಂಡು ಹೋಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

RELATED ARTICLES
- Advertisment -
Google search engine

Most Popular