ಮಂಗಳೂರು(ದಕ್ಷಿಣ ಕನ್ನಡ): ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮವು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.
ಇದೇ ವೇಳೆ ಮಾತನಾಡಿದ ಅವ್ರು, ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.
ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.
ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.