ಬೆಂಗಳೂರು: ನಿನ್ನೆ ವಯೋಸಹಜ ಖಾಯಿಲೆಯಿಂದ ನಿಧನರಾದ ಬಹುಭಾಷಾ ಹಿರಿಯ ನಟಿ ಸರೋಜಾದೇವಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಂತಿಮ ನಮನ ಸಲ್ಲಿಸಿದರು.
ಇಂದು ಬೆಳಗ್ಗೆ ಮಲ್ಲೇಶ್ವರಂನ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಬಿ. ಸರೋಜಾದೇವಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಸಚಿವ ಹೆಚ್.ಸಿ. ಮಹದೇವಪ್ಪ ಕೂಡ ಅವರೊಂದಿಗೆ ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತ. ಅವರು ಬಹಳ ಚಿಕ್ಕ ವಯಸ್ಸಿನಲ್ಲಿ ಚಿತ್ರರಂಗ ಪ್ರವೇಶಿಸಿ, ಹಲವಾರು ಭಾಷೆಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದ ಬೆಳವಣಿಗೆಗೆ ಅವರ ಕೊಡುಗೆ ಅಪಾರವಾಗಿದೆ,” ಎಂದು ಹೇಳಿದರು.
ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂಬುದಾಗಿ ಸಿಎಂ ಘೋಷಿಸಿದರು.