Saturday, May 30, 2026
Google search engine

Homeರಾಜ್ಯಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪರಿಗೆ ಸಿಎಂ ಸಿದ್ದರಾಮಯ್ಯ ಶ್ರದ್ಧಾಂಜಲಿ

ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪರಿಗೆ ಸಿಎಂ ಸಿದ್ದರಾಮಯ್ಯ ಶ್ರದ್ಧಾಂಜಲಿ

ತುಮಕೂರು: ಅಹಿಂದ ವರ್ಗದ ಧ್ವನಿಯಾಗಿದ್ದ ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಚಿವರಾಗಿದ್ದ ಅವರ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ ಅವರು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು. ರೈತರಾಗಿ ರೈತರ ಹಿತಕ್ಕಾಗಿ ನಿರಂತರವಾಗಿ ಶ್ರಮಿಸಿದ್ದಾರೆ ಎಂದು ಸಿಎಂ ಸ್ಮರಿಸಿದರು. ಇತ್ತೀಚೆಗಷ್ಟೇ ನನ್ನನ್ನು ಭೇಟಿಯಾಗಿದ್ದರು ಎಂದು ಅವರು ಹೇಳಿದರು.

ವೆಂಕಟರಮಣ್ಣಪ್ಪ ಅವರ ಪುತ್ರರೂ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ತಂದೆಯ ಆದರ್ಶಗಳನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅವರ ಅಕಾಲಿಕ ನಿಧನ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸಿದರು.

RELATED ARTICLES
- Advertisment -
Google search engine

Most Popular