ಬೆಂಗಳೂರು: ದಸರಾ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಬಿವೈ ವಿಜಯೇಂದ್ರ ಮಾತನಾಡಿ, ಸಿದ್ದರಾಮಯ್ಯ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ವಾತಾವರಣ ನಿರ್ಮಾಣವಾಗಿದೆ. ದಸರಾ ಮುಗಿಯುತ್ತಿದ್ದಂತೆ ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂದರು.
ಹೈಕಮಾಂಡ್ ಏನು ಚರ್ಚೆ ಮಾಡಿದೆ ಎಂದು ಸಿದ್ದರಾಮಯ್ಯಗೆ ಗೊತ್ತಿದೆ. ಸಚಿವರು ರಾಜ್ಯಪ್ರವಾಸ ಮಾಡುತ್ತಿಲ್ಲ. ಅಭಿವೃದ್ದಿಯನ್ನೂ ಮಾಡುತ್ತಿಲ್ಲ ಎಂದು ಕಿಡಿಕಾರಿದರು.