ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದಿನಿಂದ ೩ ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಂಜೆ ೫.೩೦ಕ್ಕೆ ಬೆಂಗಳೂರಿಂದ ರಸ್ತೆ ಮೂಲಕ ಮೈಸೂರಿಗೆ ತೆರಳಿಲಿದ್ದಾರೆ. ಬಳಿಕ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲಿಯೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಬೆಳಿಗ್ಗೆ ೧೦.೧೫ಕ್ಕೆ ಸಿಎಂ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಲಿದ್ದಾರೆ. ಈ ಮೂಲಕ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ ೪ ಗಂಟೆಗೆ ದಸರಾ ಕುಸ್ತಿ ಪಂದ್ಯಾವಳಿಗೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದು, ದೇವರಾಜ ಅರಸು ವಿವಿದೊದ್ದೇಶ ಕ್ರೀಡಾಂಗಣದಲ್ಲಿ ವಸ್ತು ಪ್ರದರ್ಶನವನ್ನ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ ೭ಕ್ಕೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇನ್ನು ನಾಳೆ ರಾತ್ರಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲೇ ಉಳಿಯಲಿದ್ದಾರೆ.
ಅ. ೧೬ ರಂದು ಯುವರಾಜ ಕಾಲೇಜು ಹಿರಿಯ ಸಂಘದಿಂದ ಆಯೋಜಿಸಿರುವ ೨೦ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ ೧೨ಕ್ಕೆ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ವತಿಯಿಂದ ಪೌರಕಾರ್ಮಿಕರಿಗೆ ನಿರ್ಮಿಸಿರುವ ಸಮುದಾಯ ಭವನವನ್ನ ಸಿಎಂ ಉದ್ಘಾಟಿಸಲಿದ್ದಾರೆ. ಸಂಜೆ ೪ ಗಂಟೆಗೆ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಕನಕ ಗುರು ಪೀಠದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಲಿದ್ದಾರೆ. ಅ.೧೬ರ ಸಂಜೆ ೫.೫೫ಕ್ಕೆ ಮೈಸೂರಿನಿಂದ ಸಿಎಂ ಸಿದ್ದರಾಮಯ್ಯ ನಿರ್ಗಮಿಸಲಿದ್ದಾರೆ. ಮೈಸೂರಿನ ಮಂಡಕಹಳ್ಳಿ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ಸಿಎಂ ವಾಪಸ್ ಪ್ರಯಾಣ ಬೆಳೆಸಲಿದ್ದಾರೆ.