ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಇಂದು ಶುಕ್ರವಾರ ಚಾಮರರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿ ಮತ್ತು ವರುಣಾ ವಿಧಾನಸಭಾ ಕ್ಷೇತ್ರದ ಭಾಗವಾಗಿರುವ ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದರು. ಲೋಕಸಭಾ ಚುನಾವಣೆಗೆ ಇಂದು ರಾಜ್ಯದ ೧೪ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ತಮ್ಮ ಬೆಂಗಾವಲು ಪಡೆಯೊಂದಿಗೆ ವಾಹನದಲ್ಲಿ ಬಂದ ಸಿದ್ದರಾಮಯ್ಯರನ್ನು ನೋಡಿದಾಗ ವೋಟು ಮಾಡಲು ಬಂದಿದ್ದಾರೋ ಇಲ್ಲ ಚುನಾವಣಾ ಪ್ರಚಾರಕ್ಕೆ ಬಂದಿದ್ದ್ದಾರೋ ಎಂಬ ಅನುಮಾನ ಮೂಡಿತು. ಮತಗಟ್ಟೆಯ ಬಳಿ ನೆರೆದಿದ್ದ ಜನ ಅವರನ್ನು ನೋಡಿದ ಕೂಡಲೇ ಘೋಷಣೆಗಳನ್ನು ಕೂಗಲಾರಂಭಿಸಿದರು.
ಮತ ಚಲಾಯಿಸಿ ಹೊರಬಂದ ಬಳಿಕ ಸಿದ್ದರಾಮಯ್ಯ ಮತ್ತು ಯತೀಂದ್ರ ಜನರಿಗೆ ತಮ್ಮ ಬೆರಳುಗಳ ಮೇಲಿನ ಇಂಕ್ ಮಾರ್ಕ್ ತೋರಿಸಿದರು.