Friday, April 18, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಿಕಾ ವಿತರಕರ ಬಂಧು ಬಿರುದು ನೀಡಿ ಸನ್ಮಾನ

ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಿಕಾ ವಿತರಕರ ಬಂಧು ಬಿರುದು ನೀಡಿ ಸನ್ಮಾನ

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಿಕಾ ವಿತರಕರ ಬಂಧು ಎನ್ನುವ ಬಿರುದು ನೀಡಿ ಸನ್ಮಾನಿಸಿತು.

ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನದಲ್ಲಿ ಈ ಬಿರುದು ನೀಡಲಾಗಿದ್ದು ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗದ ಕಾರಣ ಇಂದು ಕಾವೇರಿ ನಿವಾಸಕ್ಕೇ ಬಂದು ಗೌರವಿಸಲಾಯಿತು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಶಂಬುಲಿಂಗ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಕಾಂಗ್ರೆಸ್ ಮುಖಂಡರಾದ ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲ್ ಅವರು ಉಪಸ್ಥಿತರಿದ್ದು ಪತ್ರಿಕಾ ವಿತರಕ ಸಮುದಾಯಕ್ಕೆ ಸರ್ಕಾರ ನೀಡಿರುವ ನೆರವನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು.

RELATED ARTICLES
- Advertisment -
Google search engine

Most Popular