ಮಳವಳ್ಳಿ: ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಮಧ್ಯಾಹ್ನ ಮಳವಳ್ಳಿ ತಾಲ್ಲೂಕಿನ ಪೂರಿಗಾಲಿಗೆ ಭೇಟಿ ನೀಡಿ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ತಂದೆ ಪಿ.ಎನ್.ಮಲ್ಲಯ್ಯ (೯೩) ಅವರ ಪಾರ್ಥಿವ ಶರೀರದ ದರ್ಶನ ಪಡೆದು, ನಮನ ಸಲ್ಲಿಸಿದರು.
ಮಂಡ್ಯದ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು, ಪೂರಿಗಾಲಿಗೆ ತೆರಳಿ ಮಲ್ಲಯ್ಯ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಾಂತ್ವಾನ ಹೇಳಿದರು.
