Saturday, April 19, 2025
Google search engine

Homeರಾಜಕೀಯಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಡಾ ಸಂಬಂಧ ಏನೇ ತನಿಖೆ ನಡೆಯಲಿ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಪರ ಸಚಿವ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್ ಮಾಡಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ ಬಳಿಕ ಪ್ರತಿಕ್ರಿಯಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಹೈಕೋರ್ಟ್ ಸೂಕ್ಷ್ಮವಾಗಿ ತನಿಖೆಗೆ ಆದೇಶ ಮಾಡಿದೆ. ೧೭ಎ ಅಡಿ ತನಿಖೆಗೆ ಅನುಮತಿ ಕೊಟ್ಡಿದೆ. ಕೋರ್ಟ್ ೨೧೮ ಬಿಎನ್ ಎಸ್ ಎಸ್ ಅಡಿ ತಿರಸ್ಕಾರ ಮಾಡಿದೆ. ಸಿಎಂ ಕೂಡಾ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ನಾವೇ ಮೊದಲು ನ್ಯಾಯಾಂಗ ರಚನೆ ಮಾಡಿದ್ದೇವೆ. ನಾವು ತನಿಖೆಯಿಂದ ಹಿಂದೆ ಸರಿಯಲ್ಲ. ತನಿಖೆ ಆಗಲಿ ಎಂದು ತಿಳಿಸಿದರು.

ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ. ಬಿಜೆಪಿಗೆ ರಾಜ್ಯಪಾಲರು ಸ್ಟೇಷನ್ ಹೌಸ್ ಆಗಿದ್ದಾರೆ. ರಾಜ್ಯಪಾಲರು ಕಾನೂನು ಪ್ರಕಾರ ಆದೇಶ ಕೊಡಬೇಕು. ಆದರೆ ಅದನ್ನು ಮಾಡಿಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular