Saturday, April 12, 2025
Google search engine

Homeರಾಜ್ಯರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

ರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದಿದ್ದಾರೆ.

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ, ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಹೇಳಿದ್ದಾರೆ.

ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ ಎಂದು ತಿಳಿಸಿದ್ದಾರೆ.ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular