Saturday, April 12, 2025
Google search engine

Homeರಾಜ್ಯನವರಾತ್ರಿ ಹಬ್ಬವನ್ನು ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ: ಬಿಜೆಪಿ ಕಿಡಿ

ನವರಾತ್ರಿ ಹಬ್ಬವನ್ನು ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ ಬಳಸಿಕೊಂಡಿರುವುದು ಅಕ್ಷಮ್ಯ: ಬಿಜೆಪಿ ಕಿಡಿ

ಬೆಂಗಳೂರು: ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಬಿಜೆಪಿಯು, ಮುಡಾ ಹಗರಣದ ಆರೋಪಿ ಸಿದ್ಧರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ. ರಾಮ ಸತ್ಯನೇ, ಆದರೆ ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳು. ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದ. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಸಿಎಂ ಪದವಿಗೆ ರಾಜೀನಾಮೆ ಸಲ್ಲಿಸಿ ಸತ್ಯಶೋಧನೆಗೆ ಅವಕಾಶ ನೀಡಿ ಎಂಬುದಾಗಿ ಒತ್ತಾಯಿಸಿದೆ.

ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ.

RELATED ARTICLES
- Advertisment -
Google search engine

Most Popular