Friday, April 4, 2025
Google search engine

Homeರಾಜ್ಯಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಗುಡ್ಡ ಕುಸಿತದ ಪರಿಣಾಮ ಸುಮಾರು ೨೦ ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣ ಇತರೆ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular