ವರದಿ: ಸ್ಟೀಫನ್ ಜೇಮ್ಸ್
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಗಾವಿ ನಗರಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಉರುಸ್ ಮೆರವಣಿಗೆಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ ಕೂಗಿ ಮಾಬುಸುಬಾನಿ ದರ್ಗಾದ ಉರುಸ್ ವೇಳೆ ಘೋಷಣೆಗೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಶ್ನೆ ಮಾಡಿದ ಸ್ಥಳೀಯ ಹಿಂದು ನಿವಾಸಿಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ದರ್ಗಾಕ್ಕೆ ಹೋಗುತ್ತಿದ್ದ ಮೆರವಣಿಗೆ ಈ ವರ್ಷ ಅನುಮತಿ ಇಲ್ಲದೇ ಖಡಕ್ ಗಲ್ಲಿಗೆ ಎಂಟ್ರಿಯಾದ ಮೆರವಣಿಗೆ ವೇಳೆ ಐ ಲವ್ ಮೊಹಮ್ಮದ್ ಎಂಬ ಘೋಷಣೆ ಕೂಗಿದ್ದಾರೆ.
ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ. ತಮ್ಮ ಏರಿಯಾಕ್ಕೆ ಬಂದು ಘೋಷಣೆ ಕೂಗಿದ್ದು ಯಾಕೆ ಅಂತಾ ಪ್ರಶ್ನೆ ಮಾಡಿದ ಹಿಂದುಗಳ ಮೇಲೆ ಪುಂಡಾಟ ಮೆರೆದಿದ್ದಾರೆ.
ಬಳಿಕ ತಲ್ವಾರ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಮೆರವಣಿಗೆ ಕಳುಹಿಸಿದ ಪೊಲೀಸರು ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಬಿಗುವಿಣ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಯತ್ನ ನಡೆಸಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.