ಗುಂಡ್ಲುಪೇಟೆ: ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಮಲ್ಲೇಶ್ ಅವರಿಗೆ ಸರ್ಕಾರದ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಜಾಪುರದಲ್ಲಿ ನಡೆದ ೭೦ನೇ ಅಖಿಲ ಭಾರತ ಸಹಕಾರ ಸಪ್ತಾಹ-೨೦೨೩ ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಮಲ್ಲೇಶ್ ಸೇವೆ ಗುರುತಿಸಿ ಕರ್ನಾಟಕ ರಾಜ್ಯ ಸಹಕಾರ ಸಂಸ್ಥೆ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹಕಾರ ಸಚಿವ ರಾಜಣ್ಣ ಹಾಗೂ ಮಂತ್ರಿ ಮಂಡಲದ ಸದ್ಯಸರು ಸಮ್ಮುಖದಲ್ಲಿ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಕುರಿತು ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಮಲ್ಲೇಶ್ ಮಾತನಾಡಿ, ಸರ್ಕಾರವು ನನ್ನ ಸೇವೆಗೆ ಗುರುತಿಸಿ ಪ್ರಶಸ್ತಿ ನೀಡಿರುವುದು ನನಗೆ ತುಂಬಾ ಖುಷಿ ತಂದಿದೆ. ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ನೀಡಲು ಇಂಬು ನೀಡಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.