Saturday, December 27, 2025
Google search engine

Homeರಾಜ್ಯಮಂಗಳೂರಲ್ಲಿ ಕರಾವಳಿ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರಲ್ಲಿ ಕರಾವಳಿ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

ಕರಾವಳಿ ಉತ್ಸವದ ಅಂಗವಾಗಿ ಫುಟ್ ಬಾಲ್ ಮತ್ತು ವಾಲಿಬಾಲ್ ಕ್ರೀಡಾಕೂಟಕ್ಕೆ ಶನಿವಾರ ಉಳ್ಳಾಲ ಬೀಚ್ ನಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಪಂದ್ಯಾಟಕ್ಕೆ ಚಾಲನೆ ನೀಡಿದರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಸ್ವಾಗತಿಸಿದರು. ಮೊದಲ ದಿನವಾದ ಶನಿವಾರ, 17 ವರ್ಷ ವಯೋಮಾನದೊಳಗಿನ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ 6 ತಂಡಗಳು ಮತ್ತು ಬಾಲಕಿಯರ ವಿಭಾಗದಲ್ಲಿ 9 ತಂಡಗಳು ಭಾಗವಹಿಸಿದವು.
ಫುಟ್ ಬಾಲ್ ಪಂದ್ಯಾಟದಲ್ಲಿ 16 ತಂಡಗಳು ಪಾಲ್ಗೊಂಡಿದ್ದಾರೆ.
ಭಾನುವಾರ ಸಾರ್ವಜನಿಕರ ಮುಕ್ತ ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ.

RELATED ARTICLES
- Advertisment -
Google search engine

Most Popular