ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಪ್ರಯಾಣಿಕರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.
ನೈಜೀರಿಯಾದ ಪ್ರಜೆಯೊಬ್ಬ ತನ್ನ ಹೊಟ್ಟೆಯೊಳಗೆ ಕ್ಯಾಪ್ಸುಲ್‌ಗಳಲ್ಲಿ ಕೊಕೇನ್ ಅನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ್ದನು. ಕಸ್ಟಮ್ಸ್ ಅಧಿಕಾರಿಗಳು 99 ಕ್ಯಾಪ್ಸುಲ್‌ಗಳಲ್ಲಿ ಬಚ್ಚಿಟ್ಟಿದ್ದ 2 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕ ಇಥಿಯೋಪಿಯಾದ ಅಡಿಸ್ ಅಬಾಬಾದಿಂದ ಬೆಂಗಳೂರಿಗೆ ಆಗಮಿಸಿದ್ದನು.