Saturday, April 19, 2025
Google search engine

Homeರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳ ಸಂಗ್ರಹ : ಸಚಿವ ಡಾ.ಜಿ.ಪರಮೇಶ್ವರ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳ ಸಂಗ್ರಹ : ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಮಹತ್ವದ ಸಾಕ್ಷ್ಯಗಳ ಸಂಗ್ರಹಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೊಲೀಸರು ಚಾರ್ಜ್ ಶೀಟ್ ಮಾಡಲು ಸಿದ್ದತೆ ನಡೆಸಿದ್ದಾರೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ. ತಪ್ಪು ಮಾಡಿದವರು ಯಾರೇ ಆಗಲಿ ಕಾನೂನಿನ ಪ್ರಕಾರ ಕ್ರಮ ಆಗಲಿದೆ. ಪೊಲೀಸರರು ತನಿಖೆ ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular